ADVERTISEMENT

ಕಾರಿನಲ್ಲಿ ಬೆಂಕಿ: ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಸಾವು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 17:13 IST
Last Updated 5 ಡಿಸೆಂಬರ್ 2025, 17:13 IST
   

ಧಾರವಾಡ: ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಭದ್ರಾಪುರ ಬಳಿಯ (ಗದಗ–ಹುಬ್ಬಳ್ಳಿ ಹೆದ್ದಾರಿ) ಅರೆರಾ ಸೇತುವೆ ಸಮೀಪ ಕಾರು ರಸ್ತೆಯ ವಿಭಜಕಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಹಾವೇರಿಯ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ (45) ಸಾವಿಗೀಡಾಗಿದ್ದಾರೆ.

ರಾತ್ರಿ 7.30ರ ಹೊತ್ತಿಗೆ ಅವಘಡ ಸಂಭವಿಸಿದೆ. ಪಂಚಾಕ್ಷರಿ ಅವರು ಕಾರು ಚಾಲನೆ ಮಾಡುತ್ತಿದ್ದರು.

ಅಣ್ಣಿಗೇರಿ ಠಾಣೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ ಧಾವಿಸಿ ಅಗ್ನಿ ನಂದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.