ADVERTISEMENT

ಶಿಕ್ಷಣ ಸಂಸ್ಥೆ ವಿವಾದ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 5:30 IST
Last Updated 27 ಜನವರಿ 2022, 5:30 IST
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ   

ಧಾರವಾಡ: ತಾಲ್ಲೂಕಿನ ಮುಗದ ಗ್ರಾಮದಲ್ಲಿರುವ ಸರ್ವೋದಯ ಶಿಕ್ಷಣ ಟ್ರಸ್ಟ್‌ ವಿವಾದಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಸಮಾಜದವರ ಮೇಲೆ ಮಂಗಳವಾರ ಹಲ್ಲೆ ನಡೆದಿದೆ ಎಂದು ಆರೋಪಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಐವರ ವಿರುದ್ಧ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಾದಿತ ಸರ್ವೋದಯ ಶಿಕ್ಷಣ ಟ್ರಸ್ಟ್‌ಗೆ ಸೇರಿದ ಶಿಕ್ಷಣ ಸಂಸ್ಥೆಯಲ್ಲಿ ಬಸವರಾಜ ಹೊರಟ್ಟಿ ಅವರ ನಾಮಫಲಕ ತೆಗೆಯಲು ತಿಳಿಸಿದ್ದು ಗಲಾಟೆಗೆ ಕಾರಣವಾಗಿತ್ತು. ಗಲಾಟೆಯಲ್ಲಿ ವಾಲ್ಮೀಕಿ ಸಂಘದ ಪದಾಧಿಕಾರಿಗಳು ಬಂದಿದ್ದ ಕಾರಿನ ಮೇಲೆ ಹೊರಟ್ಟಿ ಬೆಂಬಲಿಗರು ಕಲ್ಲುತೂರಾಟ ನಡೆಸಿದ್ದಾರೆ ಎಂದು ವಾಲ್ಮೀಕಿ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ ಗುಡಸಲಮನಿ ಆರೋಪಿಸಿದ್ದಾರೆ. ಪ್ರಕರಣದಲ್ಲಿ ವೆಂಕಟೇಶ ಲಕ್ಸಾಣಿ, ಚೈತ್ರಾ ಮೇಟಿ, ನಿರ್ಮಲಾ ಚವ್ಹಾಣ, ದೊಡ್ಡಪ್ಪ ಕೆಂಗಣ್ಣನವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಘಟನೆ ಕುರಿತ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT