ADVERTISEMENT

ಹುಬ್ಬಳ್ಳಿ: ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2018, 4:18 IST
Last Updated 23 ಅಕ್ಟೋಬರ್ 2018, 4:18 IST
   

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಪೊಲೀಸರು ಮಂಗಳವಾರ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿ ಬಂದೂಕು ಮಚ್ಚು, ಲಾಂಗ್, ಡ್ರ್ಯಾಗರ್ ವಶಪಡಿಸಿಕೊಂಡಿದ್ದಾರೆ.

ಅಪರಾಧ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ಅವರ ನೇತೃತ್ವದಲ್ಲಿ ಮೂರು ತಂಡಗಳುಹುಬ್ಬಳ್ಳಿಯ ಆನಂದ ನಗರ, ಹೊಸೂರ, ಗಿರಣಿ ಚಾಳದಲ್ಲಿರುವ ರೌಡಿಗಳ‌ ಮನೆಯಲ್ಲಿ ತಪಾಸಣೆ ನಡೆಸಿತು.

ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ದಾಳಿ ನಡೆಸಲಾಗಿದೆ. ಮೂರು ತಿಂಗಳ ಹಿಂದೆ ಸಹ ಅವಳಿನಗರದಲ್ಲಿ ರೌಡಿಗಳ ಮನೆಯ ಮೇಲೆ ದಾಳಿ ನಡೆಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.