ADVERTISEMENT

ಧಾರವಾಡ | ಕೀಟಜನ್ಯ ರೋಗ: ಜಾಗೃತಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಮೇ 2022, 3:59 IST
Last Updated 18 ಮೇ 2022, 3:59 IST
ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಡಾ. ಸುರೇಶ ಇಟ್ನಾಳ ಮಾತನಾಡಿದರು
ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಡಾ. ಸುರೇಶ ಇಟ್ನಾಳ ಮಾತನಾಡಿದರು   

ಧಾರವಾಡ: ‘ಮಳೆಗಾಲ ಆರಂಭ ಆಗಿರುವುದರಿಂದ ಡೆಂಗಿ, ಚಿಕುನ್‌ ಗುನ್ಯ ಸೇರಿದಂತೆ ಕೀಟ ಜನ್ಯ ರೋಗಗಳ ನಿಯಂತ್ರಣ ಕುರಿತು ಆರೋಗ್ಯಇಲಾಖೆಯು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿಮುಂಜಾಗ್ರತವಾಗಿ ಸುರಕ್ಷಾ ಕ್ರಮ ಕೈಗೊಳ್ಳಬೇಕು. ಸಂಬಂಧಿತ ಇಲಾಖೆಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುರೇಶ ಇಟ್ನಾಳ ತಿಳಿಸಿದರು.

ನಗರದ ಜಿಲ್ಲಾ ಪಂಚಾಯ್ತ ಸಭಾಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಲೇರಿಯಾ, ಡೆಂಗಿ, ಚಿಕುನ್ ಗುನ್ಯ, ಮೆದುಳು ಜ್ವರ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಪಾತ್ರ ಬಹುಮುಖ್ಯ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಗುಂಡಿಗಳು ಮುಚ್ಚಿಸುವುದರ ಮೂಲಕ ನೀರುಸಂಗ್ರಹವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮ ಪಂಚಾಯ್ತಿಗಳು ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಸಕ್ರಿಯವಾಗಿ ಪಾಲ್ಗೊಳ್ಳಬೇಕು’ ಎಂದರು.

ADVERTISEMENT

‘ನಗರ, ಪಟ್ಟಣ ಪ್ರದೇಶಗಳಲ್ಲಿ ಸುರಕ್ಷಿತ ನೀರು ಸರಬರಾಜು, ಚರಂಡಿ ಸ್ವಚ್ಛತೆ, ನೀರು ಸಂಗ್ರಹವಾಗದಂತೆ ಜಾಗೃತಿ ವಹಿಸಬೇಕು. ರಸ್ತೆ ಬದಿಯಲ್ಲಿ ತೆರೆದ ವಾತಾವರಣದಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧಿಸಲು ಮತ್ತು ಹೋಟೆಲ್‌ಗಳಲ್ಲಿ ಸ್ವಚ್ಛತೆ,ನೈರ್ಮಲ್ಯ ಕಾಪಾಡುವಂತೆ ನಗರಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಕಾನೂನು ರೀತಿ ಕ್ರಮ ವಹಿಸಬೇಕು. ನೀರು ಸರಬರಾಜು ಪೈಪ್‌ಗಳನ್ನು ಆಗಿಂದಾಗ್ಗೆ ಪರೀಕ್ಷಿಸುವುದರೊಂದಿಗೆ ಸೋರಿಕೆ ತಡೆಗಟ್ಟಬೇಕು’ ಎಂದು ಸೂಚಿಸಿದರು.

ಡಿಎಚ್‌ಒ ಡಾ.ಬಿ.ಸಿ. ಕರಿಗೌಡರ, ಟಿ.ಪಿ. ಮಂಜುನಾಥ, ಡಾ. ಶಿವಕುಮಾರ ಮಾನಕರ, ಡಾ. ಶಶಿ ಪಾಟೀಲ, ಡಾ. ಸುಜಾತಾ ಹಸವಿಮಠ, ಡಾ. ಎಸ್.ಬಿ. ನಿಂಬಣ್ಣವರ, ಡಾ.ಎಸ್.ಎಂ. ಹೊನಕೇರಿ, ಡಾ. ಮಂಜುನಾಥ ಎಸ್., ಉಮೇಶ ಕೊಂಡಿ, ಡಾ.ಎಚ್.ಎಚ್. ಕುಕನೂರು, ಡಾ. ಶ್ರೀಧರದಂಡಪ್ಪನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.