
ಪ್ರಜಾವಾಣಿ ವಾರ್ತೆ
ಧಾರವಾಡ: ‘ಧಾರವಾಡ ಸೆಂಟ್ರಲ್ ರೋಟರಿ ಕ್ಲಬ್ ವತಿಯಿಂದ ಫೆ. 27ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗರ್ಭಾಶಯ (ಸರ್ವಿಕಲ್) ಕ್ಯಾನ್ಸರ್ ತಡೆಗಟ್ಟುವ ಲಸಿಕಾ ಅಭಿಯಾನ ಆರಂಭವಾಗಲಿದೆ’ ಎಂದು ಡಾ.ಕವನ ದೇಶಪಾಂಡೆ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಮೆರಿಕದ ಸೆಂಟ್ರಲ್ ಚೆಸ್ಟರ್ ಕೌಂಟಿಯ ರೋಟರಿ ಕ್ಲಬ್, ಭಾರತೀಯ ಕುಟುಂಬ ಯೋಜನಾ ಸಂಘ (ಎಫ್‍ಪಿಎಐ) ಮತ್ತು ಟಾಟಾ ಮೋಟರ್ಸ್ ಬಾಡಿ ಸೊಲ್ಯೂಷನ್ಸ್ ಸಹಯೋಗದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದರು.
‘ಅಭಿಯಾನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ ನೀಡುವರು. ಜಿಲ್ಲೆಯ ಗ್ರಾಮೀಣ ಪ್ರದೇಶಗಳ 9 ರಿಂದ 14 ವರ್ಷದ 2,500 ಬಾಲಕಿಯರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ’ ಎಂದರು.
ಡಾ. ಪಲ್ಲವಿ ದೇಶಪಾಂಡೆ, ಕರಣ್ ದೊಡವಾಡ, ವಾಮನ್ ಮಂತ್ರಿ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.