ADVERTISEMENT

ಧಾರವಾಡ | ಸಿಇಟಿ: ಮೊದಲ ದಿನ ಸುಗಮ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 16:06 IST
Last Updated 16 ಏಪ್ರಿಲ್ 2025, 16:06 IST

ಧಾರವಾಡ: ವೃತಿ ಶಿಕ್ಷಣ ಕೋರ್ಸ್‌ ಪ್ರವೇಶಾತಿಗೆ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬುಧವಾರ ಸುಸೂತ್ರವಾಗಿ ನಡೆದಿದೆ.

ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತವಿಜ್ಞಾನ ವಿಷಯ ಪರೀಕ್ಷೆ ನಡೆಯಿತು. 14,832 ಪರೀಕ್ಷಾರ್ಥಿಗಳ ಪೈಕಿ 14,386 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 446 ಮಂದಿ ಗೈರು ಹಾಜರಾಗಿದ್ದರು.

ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನವಿಜ್ಞಾನ ವಿಷಯ ಪರೀಕ್ಷೆ ನಡೆಯಿತು.

ADVERTISEMENT

4,832 ಪರೀಕ್ಷಾರ್ಥಿಗಳ ಪೈಕಿ 14,387 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 445 ಮಂದಿ ಗೈರು ಹಾಜರಾಗಿದ್ದರು.

‘ಧಾರವಾಡದಲ್ಲಿ 21 ಹಾಗೂ ಹುಬ್ಬಳ್ಳಿಯಲ್ಲಿ 19 ಒಟ್ಟು 40 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಎಲ್ಲ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದೆ. ಏ.17ರಂದು ಬೆಳಿಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವವಿಜ್ಞಾನ ಪರೀಕ್ಷೆ ನಡೆಯಲಿದೆ’ ಎಂದು ಡಿಡಿಪಿಯು ಸುರೇಶ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.