ADVERTISEMENT

ಪಕ್ಷಿಗಳ ಬಾಯಾರಿಕೆ ನೀಗಿಸಿ: ಕುಲಪತಿ ಕೆ.ಬಿ.ಗುಡಸಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2024, 13:56 IST
Last Updated 7 ಏಪ್ರಿಲ್ 2024, 13:56 IST
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಹಸಿರು ಉದ್ಯಾನ ಆವರಣದಲ್ಲಿ ಪಕ್ಷಿಗಳಿಗೆ ಧಾನ್ಯ ಹಾಗೂ ನೀರು ಇಡುವ ಕಾರ್ಯಕ್ಕೆ ಕುಲಪತಿ ಕೆ.ಬಿ.ಗುಡಸಿ ಭಾನುವಾರ ಚಾಲನೆ ನೀಡಿದರು 
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಹಸಿರು ಉದ್ಯಾನ ಆವರಣದಲ್ಲಿ ಪಕ್ಷಿಗಳಿಗೆ ಧಾನ್ಯ ಹಾಗೂ ನೀರು ಇಡುವ ಕಾರ್ಯಕ್ಕೆ ಕುಲಪತಿ ಕೆ.ಬಿ.ಗುಡಸಿ ಭಾನುವಾರ ಚಾಲನೆ ನೀಡಿದರು     

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಉದ್ಯಾನ ವಿಭಾಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಹಯೋಗದಲ್ಲಿ ಹಸಿರು ಉದ್ಯಾನ, ಬೊಟಾನಿಕಲ್ ಉದ್ಯಾನ ಹಾಗೂ ವಿವಿಧ ಸ್ನಾತಕೋತ್ತರ ವಿಭಾಗಗಳ ಎದುರು ಪಕ್ಷಿಗಳಿಗೆ ಧಾನ್ಯ ಹಾಗೂ ನೀರು ಇಡುವ ಕಾರ್ಯಕ್ಕೆ ಭಾನುವಾರ ಕುಲಪತಿ ಕೆ.ಬಿ.ಗುಡಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಆವರಣದಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಲಾಗಿದೆ. ಬೇಸಿಗೆಯ ಬಿರು ಬಿಸಿಲಿನಿಂದ ಬಳಲುತ್ತಿರುವ ಪಕ್ಷಿಗಳಿಗೆ ಧಾನ್ಯ ಹಾಗೂ ನೀರುಣಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ನೆರವಾಗಬೇಕು’ ಎಂದರು.

ಕುಲಸಚಿವ ಎ. ಚೆನ್ನಪ್ಪ ಮಾತನಾಡಿ, ‘ಮನುಷ್ಯ ಸೇರಿದಂತೆ ಪ್ರಾಣಿ, ಪಕ್ಷಿಗಳಿಗೆ ಪರಿಸರ ಅವಶ್ಯವಾಗಿ ಬೇಕು. ಆದ್ದರಿಂದ ಪ್ರತಿಯೊಬ್ಬರಲ್ಲಿ ಪರಿಸರ ಕಾಳಜಿ ಹಾಗೂ ಜಾಗೃತಿ ಇರಬೇಕು’ ಎಂದು ಹೇಳಿದರು.

ADVERTISEMENT

ಪರೀಕ್ಷಾಂಗ ಕುಲಸಚಿವ ನಿಜಲಿಂಗಪ್ಪ ಮಟ್ಟಿಹಾಳ ಮಾತನಾಡಿ, ‘ಸಕಲ ಜೀವಾತ್ಮರಿಗೆ ಲೇಸನ್ನು ಬಯಸುವುದೇ ನಿಜವಾದ ಧರ್ಮ. ಈ ವರ್ಷ ಬಿಸಿಲು ಹೆಚ್ಚಾಗಿದ್ದು, ಪ್ರತಿಯೊಬ್ಬರೂ ತಮ್ಮ ಮನೆ ಮುಂದೆ ನೀರು ಇಡುವ ಮೂಲಕ ಪಕ್ಷಿಗಳ ದಾಹ ನೀಗಿಸಬೇಕು’ ಎಂದರು.

ಉದ್ಯಾನ ವಿಭಾಗದ ಮುಖ್ಯಸ್ಥ ಮುಲಗುಂದ, ಎನ್.ಎಸ್.ಎಸ್ ಅಧಿಕಾರಿ ಎಂ.ಬಿ ದಳಪತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.