ADVERTISEMENT

‘2ಎ ಮೀಸಲಾತಿ ನೀಡದಿದ್ದರೆ ಪಾದಯಾತ್ರೆ’

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 20:34 IST
Last Updated 22 ನವೆಂಬರ್ 2020, 20:34 IST

ಕುಂದಗೋಳ (ಹುಬ್ಬಳ್ಳಿ): ‘ಪಂಚಮಸಾಲಿ ಸಮಾಜಕ್ಕೆ ಸರ್ಕಾರ 2ಎ ಮೀಸಲಾತಿ ನೀಡಲು ವಿಳಂಬ ಮಾಡಿದರೆ ಡಿಸೆಂಬರ್ ತಿಂಗಳಲ್ಲಿ ಕೂಡಲಸಂಗಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.

ಇಲ್ಲಿನ ಕಲ್ಯಾಣಪುರ ಬಸವಣ್ಣಜ್ಜನವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಮೀಸಲಾತಿ ನೀಡದಿದ್ದರೆ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ ಎಂದರು.

‘ಪಂಚಮಸಾಲಿ ಸಮಾಜದವರು ಹೆಚ್ಚಾಗಿರುವ ಕುಂದಗೋಳ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಪಂಚಮಸಾಲಿ ಸಮಾವೇಶ ಮಾಡಲಾಗುವುದು’ ಎಂದು ಘೋಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.