ADVERTISEMENT

ಕಣವಿ ವೈದ್ಯಕೀಯ ವೆಚ್ಚ ಭರಿಸಿ: ಮಹೇಶ ಜೋಶಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 19:57 IST
Last Updated 18 ಜನವರಿ 2022, 19:57 IST
ಚೆನ್ನವೀರ ಕಣವಿ
ಚೆನ್ನವೀರ ಕಣವಿ   

ಬೆಂಗಳೂರು: ‘ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಾಹಿತಿ ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ‘ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದು, ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಗೌರವ ಸಂಕೇತವಾಗಿ ಅವರ ಚಿಕಿತ್ಸೆಯ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT