ಹುಬ್ಬಳ್ಳಿ: ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಸರ್ಕಾರಿ ಸಂಸ್ಥೆಗಳು, ಶಾಲಾ– ಕಾಲೇಜುಗಳು ಹಾಗೂ ವಿವಿಧ ಸಂಘ–ಸಂಸ್ಥೆಗಳು ಬುಧವಾರ ನಗರದಲ್ಲಿ ವಿಜೃಂಭಣೆಯಿಂದ ಆಚರಿಸಿದವು. ಶಿವಾಜಿ ಪ್ರತಿಮೆ ಮೆರವಣಿಗೆ ಮಾಡಿ, ‘ಜೈ ಶಿವಾಜಿ... ಜೈ ಭವಾನಿ’ ಘೋಷಣೆ ಕೂಗಿದರು.
ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶಿವಾಜಿ ಜಯಂತಿ ಆಚರಿಸಲಾಯಿತು. ಛತ್ರಪತಿ ಶಿವಾಜಿ ಮಹಾರಾಜರ ವೇಷಭೂಷಣ ತೊಟ್ಟ ವಿದ್ಯಾರ್ಥಿಗಳು ಗಮನ ಸೆಳೆದರು. ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ, ಪೂಜೆ ಸಲ್ಲಿಸಲಾಯಿತು.
ಹುಬ್ಬಳ್ಳಿ ಶಹರ ತಹಶೀಲ್ದಾರ್ ಕಲಗೌಡ ಪಾಟೀಲ ಮಾತನಾಡಿ, ಶಿವಾಜಿ ಮಹಾರಾಜರ ತತ್ವಗಳು ಮತ್ತು ಆದರ್ಶಗಳನ್ನು ಮಕ್ಕಳಲ್ಲಿ ಬೆಳೆಸಬೇಕು. ಪೋಷಕರು ಮಕ್ಕಳಿಗೆ ಸಂಸ್ಕೃತಿ ಬಗ್ಗೆ ಅರಿವು ನೀಡಬೇಕು ಎಂದರು. ಮುಖಂಡರಾದ ಗುರುನಾಥ ಉಳ್ಳಿಕಾಶಿ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ. ಮಜ್ಜಗಿ, ಸುನೀಲ ಧಳವಿ, ವಿದ್ಯಾಬಾಯಿ ಪವರ, ಚಂದ್ರಶೇಖರ, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಾರಾಯಣ ವೈದ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ವಾಕರಸಾಸಂ: ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಶಿವಾಜಿ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳಾದ ಪಿ.ವೈ.ನಾಯಕ್ ಮಾತನಾಡಿ, ಹಿಂದೂ ಸ್ವರಾಜ್ಯ ಕಟ್ಟಬೇಕೆನ್ನುವ ಕನಸನ್ನು ಶಿವಾಜಿ ಮಹಾರಾಜರು ಕಂಡಿದ್ದರು ನುಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರಾದ ಪ್ರಸನ್ನಕುಮಾರ ಬಾಳಾನಾಯಕ್, ಜಗದಂಬಾ ಕೋಪರ್ಡೆ, ಮತ್ತು ಅಧಿಕಾರಿಗಳಾದ ಎಂ.ಬಿ.ಕಪಲಿ, ದಯಾನಂದ ಪಾಟೀಲ ಹಾಗೂ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು. ವಿರೂಪಾಕ್ಷ ಕಟ್ಟಿಮನಿ ಕಾರ್ಯಕ್ರಮ ನಿರೂಪಿಸಿದರು.
ಕೊಂಕಣ ಮರಾಠ ಸಮಾಜ: ಕೊಂಕಣ ಮರಾಠ ಸಮಾಜದ ವತಿಯಿಂದ ಇಲ್ಲಿನ ಬನಶಂಕರಿ ಬಡಾವಣೆ ವಿದ್ಯಾನಗರದಲ್ಲಿ ಶಿವಾಜಿ ಜಯಂತಿ ಅಪೂರ್ಣವಾಗಿ ಆಚರಿಸಲಾಯಿತು.
ಸಮಾಜದ ಅಧ್ಯಕ್ಷ ರವಿ ನಾಯಕ ಮಾತನಾಡಿ, ’ಶಿವಾಜಿ ಮಹಾರಾಜರು ಹಿಂದೂ ಧರ್ಮಿಯರನ್ನು ಒಗ್ಗೂಡಿಸಿದರು. ಮೊಘಲರ ವಿರುದ್ಧ ಹೋರಾಡಿ ಹೆಮ್ಮೆಟ್ಟಿಸಿದ್ದರು. ಅವರ ಇತಿಹಾಸ ಎಂದಿಗೂ ಪ್ರಸ್ತುತ. ಅವರ ತತ್ವ ಆದರ್ಶಗಳನ್ನು ಇಂದಿನ ಯುವಕರು ಅನುಸರಿಸಬೇಕು’ ಎಂದು ಹೇಳಿದರು.
ಕಾರ್ಯದರ್ಶಿ ಸುರೇಂದ್ರ ಗಾoವಕರ್, ಅರುಣ್ ಕುಮಾರ ಸಾಲುಂಕೆ, ಸುನಿಲ್ ನಾಯ್ಕ್ ವಿನೋದ್ ಸೈಲ ವಿನಾಯಕ ಗಾಂವಕಾರ ರಾಜೀವ ನಾಯ್ಕ್ ರಾಜಶೇಖರ ನಾಯ್ಕ್ ಸಾರ್ಥಕ ಕದಂ ಉಪಸ್ಥಿತರಿದ್ದರು.
ಪ್ರತಿಮೆಗೆ ಮಾಲಾರ್ಪಣೆ:
ಇಲ್ಲಿನ ವಿದ್ಯಾನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಲಾಯಿತು.
ವಾಕರಸಾಸಂ ನಿಗಮದ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ ಪ್ರೊ ಎಸ್.ಎಂ.ಸಾತ್ಮಾರ, ಚನ್ನಬಸಪ್ಪ ಧಾರವಾಡಶೆಟ್ಟರ್. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‍್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಸುರೇಶ ಡಿ. ಹೊರಕೇರಿ, ಗುರುರಾಜ ಕಾಟೆಣ್ಣವರ, ಪ್ರಭಯ್ಯ ಹಿರೇಮಠ, ಆರೇರ್, ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.