ಧಾರವಾಡದ ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ ಚಿಣ್ಣರ ನಾಟಕೋತ್ಸವದಲ್ಲಿ ಬಿ.ಕೆ.ಎಸ್. ವರ್ಧನ ಮಾತನಾಡಿದರು
ಧಾರವಾಡ: ‘ಮಕ್ಕಳು ಕಲಿಕೆಗೆ ಸೀಮಿತವಾಗಿ, ತಮ್ಮಲ್ಲಿರುವ ಅಪರಿಮಿತ ಕಲಾ ಶಕ್ತಿಯನ್ನು ಮರೆಯುತ್ತಿದ್ದಾರೆ’ ಎಂದು ಎಂದು ಸಿಸ್ಲೇಪ್ ನಿರ್ದೇಶಕ ಬಿ.ಕೆ.ಎಸ್. ವರ್ಧನ ಹೇಳಿದರು.
ನಗರದ ರಂಗಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್‌ಗಳ ಸಹಯೋಗದಲ್ಲಿ
ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ‘ಚಿಣ್ಣರ ನಾಟಕೋತ್ಸವ’ ಉದ್ಘಾಟಿಸಿ ಮಾತನಾಡಿದರು.
‘ಮಕ್ಕಳ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸಂವಿಧಾನ ಓದಬೇಕು.
ಸಮಾನತೆ, ಸಹೋದರತ್ವ, ಸ್ವಾತಂತ್ರ್ಯದ ಬಗ್ಗೆ ತಿಳಿದುಕೊಳ್ಳಬೇಕು’ ಎಂದರು.
ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಮಾತನಾಡಿ, ‘ನಮ್ಮ ಸಂವಿಧಾನ-ನಮ್ಮ ಕಲರವ ಧ್ಯೇಯವಾಕ್ಯದಡಿ ಈ ಬಾರಿಯ ಚಿಣ್ಣರಮೇಳ ಆಯೋಜಿಸಲಾಗಿದೆ. ಈ ಮೂಲಕ ಮಕ್ಕಳಿಗೆ ಸಂವಿಧಾನದ ಕುರಿತು ಅರಿವು ಮೂಡಿಸಲಾಗಿದೆ’ ಎಂದು ಹೇಳಿದರು.
‘ಮಕ್ಕಳಲ್ಲಿನ ಸಂಗೀತ, ಚಿತ್ರಕಲೆ, ನೃತ್ಯ, ನಟನಾ ಕೌಶಲ ಸೇರಿದಂತೆ ಹಲವಾರು ಕಲೆಗಳನ್ನು ಪ್ರದರ್ಶಿಸಲು ರಂಗಾಯಣವು ವೇದಿಕೆ ಕಲ್ಪಿಸಿಕೊಟ್ಟಿತು’ ಎಂದು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಶಿಬಿರದ ನಿರ್ದೇಶಕ ಲಕ್ಷ್ಮಣ ಪಿರಗಾರ, ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.