ADVERTISEMENT

ಹುಬ್ಬಳ್ಳಿ | ಗ್ರಾಮ ದೇವಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜು.1ಕ್ಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 14:20 IST
Last Updated 28 ಜೂನ್ 2025, 14:20 IST
ಬೆಂಗೇರಿಯಲ್ಲಿರುವ ದ್ಯಾಮಮ್ಮ, ದುರ್ಗಮ್ಮ ದೇವಿಯರ ಮೂರ್ತಿಗಳು
ಬೆಂಗೇರಿಯಲ್ಲಿರುವ ದ್ಯಾಮಮ್ಮ, ದುರ್ಗಮ್ಮ ದೇವಿಯರ ಮೂರ್ತಿಗಳು   

ಹುಬ್ಬಳ್ಳಿ: ಇಲ್ಲಿನ ಬೆಂಗೇರಿಯಲ್ಲಿ ಗ್ರಾಮದೇತೆಯರಿಗೆ ಉಡಿ ಉಂಬುವ ಕಾರ್ಯಕ್ರಮವನ್ನು ಜುಲೈ 1ರಂದು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ ದ್ಯಾಮಮ್ಮ, ದುರ್ಗಮ್ಮ ದೇವಿಯರ ಮೂರ್ತಿಗಳಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ, ಮಧ್ಯಾಹ್ನ 1 ಗಂಟೆಗೆ ಭಕ್ತರಿಂದ ಉಡಿ ತುಂಬುವ ಕಾರ್ಯಕ್ರಮ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಜುಲೈ 2ರಂದು ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಬೆಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಪಾಲ್ಗೊಳ್ಳಬೇಕು ಎಂದು ಗ್ರಾಮದೇವಿ ಟ್ರಸ್ಟ್ ಕಮಿಟಿ ಪ್ರಕಟಣೆ ತಿಳಿಸಿದೆ. ಮಾಹಿತಿಗೆ ಮೊಬೈಲ್‌ ಸಂಖ್ಯೆ: 9986326792, 8217084415. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.