ADVERTISEMENT

ಪೊಲೀಸ್ ಹುತಾತ್ಮ ದಿನ: ಮಡಿದ ಪೊಲೀಸರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗೌರವಾರ್ಪಣೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 3:17 IST
Last Updated 21 ಅಕ್ಟೋಬರ್ 2021, 3:17 IST
   

ಹುಬ್ಬಳ್ಳಿ: ಒಂದು ವರ್ಷದಲ್ಲಿ ಹುತಾತ್ಮರಾದ ಪೊಲೀಸರಿಗೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಇಲ್ಲಿನ ಹಳೇ ಸಿಎಆರ್ ಮೈದಾನದಲ್ಲಿ ಗುರುವಾರ ಗೌರವ ನಮನ ಸಲ್ಲಿಸಿದರು.

ಪೊಲೀಸ್ ಹುತಾತ್ಮ ದಿನದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಕಾರ್ಯಕ್ರಮ ಆಯೋಜಿಸಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಕ್ಕರೆ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಪಾಲ್ಗೊಂಡಿದ್ದಾರೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ ರೆಡ್ಡಿ, ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬೂರಾಮ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರಿಂದ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಣೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.