ADVERTISEMENT

ಮಲ್ಲಿಕಾರ್ಜುನ ಖರ್ಗೆಯನ್ನು ಮುಖ್ಯಮಂತ್ರಿ ಮಾಡುವುದಾದರೆ ಸ್ವಾಗತ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 16 ಮೇ 2019, 9:44 IST
Last Updated 16 ಮೇ 2019, 9:44 IST
   

ಹುಬ್ಬಳ್ಳಿ:'ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ಸ್ವಾಗತಿಸುತ್ತೇನೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸಿದ್ದರಾಮಯ್ಯ ಅವರ ಟ್ವೀಟ್ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರ‍ಪ್ಪ,ಸಚಿವ ರೇವಣ್ಣ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ ಎಂದಿರುವ ಸಿದ್ದರಾಮಯ್ಯ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಅಭ್ಯರ್ಥಿ ಪರ ಕುಂದಗೋಳದ ಅರಳಿಕಟ್ಟಿಯಲ್ಲಿ ಗುರುವಾರ ಪ್ರಚಾರ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.