ADVERTISEMENT

ಸಿ.ಎಂ ಸಿದ್ದರಾಮಯ್ಯ ಸೇವೆ ವಿಸ್ತಾರಕ್ಕೆ ಕಾಂಗ್ರೆಸ್‌ ಒಲವು: ಲಕ್ಷ್ಮಿಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 13:22 IST
Last Updated 7 ಜುಲೈ 2025, 13:22 IST
<div class="paragraphs"><p>ಲಕ್ಷ್ಮೀ ಹೆಬ್ಬಾಳಕರ</p></div>

ಲಕ್ಷ್ಮೀ ಹೆಬ್ಬಾಳಕರ

   

ಧಾರವಾಡ ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರಕ್ಕೆ ಕಾಂಗ್ರೆಸ್‌ ಪಕ್ಷ ವಿಚಾರ ಮಾಡಿದೆ. ಅದು ಒಳ್ಳೆಯದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿಹೆಬ್ಬಾಳಕರ ಪ್ರತಿಕ್ರಿಯಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ವಿಚಾರದಲ್ಲಿ ಬಿಜೆಪಿಯವರು ಏನಾದರೂ ಹುಡುಕುತ್ತಿದ್ದರೆ ಅವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮೂಹಿಕ ನಾಯಕ, ಅವರು ದೇಶದಲ್ಲಿ ಜನಪ್ರಿಯರಾಗಿದ್ದಾರೆ. ಕಾಂಗ್ರೆಸ್‌ ಪಕ್ಷ, ಹಿಂದುಳಿದವರು, ದಮನಿತರು, ಮಹಿಳೆಯರ ಬಗ್ಗೆ ಅವರಿಗೆ ಕಾಳಜಿ ಇದೆ’ ಎಂದರು.

ADVERTISEMENT

‘ಮುಖ್ಯಮಂತ್ರಿ ಬದಲಾವಣೆಗೆ ಯಾರು, ಯಾರಿಗೆ ಮತ್ತು ಯಾವಾಗ ಗಡುವು ಕೊಟ್ಟಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಹೈಕಮಾಂಡ್‌ನವರು ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.