ADVERTISEMENT

ಹುಬ್ಬಳ್ಳಿ: ಕಟೌಟ್‌ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 13:54 IST
Last Updated 24 ಜನವರಿ 2026, 13:54 IST
<div class="paragraphs"><p>ಹುಬ್ಬಳ್ಳಿ: ಕಟೌಟ್‌ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ</p></div>

ಹುಬ್ಬಳ್ಳಿ: ಕಟೌಟ್‌ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ

   

ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಂಟೂರಲ್ಲಿ ನಿರ್ಮಿಸಿದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಬಂದ ಮೂವರ ಮೇಲೆ ಬೃಹತ್‌ ಕಟೌಟ್‌ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.

ಬ್ಯಾಹಟ್ಟಿಯ ಶಂಕರ ಹಡಪದ, ಗಂಗಾಧರ ನಗರದ ಶಾಂತಾ ಕ್ಯಾರಕಟ್ಟಿ ಮತ್ತು ಧಾರವಾಡದ ಮಂಜುನಾಥ ಕುಲಕರ್ಣಿ ಅವರು ಗಾಯಗೊಂಡಿದ್ದು, ಸುಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಉಚಿತವಾಗಿ ಅಗತ್ಯ ಚಿಕಿತ್ಸೆ ಹಾಗೂ ಔಷಧಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಗೆ ತೆರಳುವ ಮಾರ್ಗದ ಅಕ್ಕಪಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಏಕಾಏಕಿ ಬೃಹತ್‌ ಕಟೌಟ್‌ ಬಿದ್ದು ಮೂವರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.