ADVERTISEMENT

ಆರೋಗ್ಯದಲ್ಲಿ ಏರುಪೇರು: ಮಣಿಪಾಲ್ ಆಸ್ಪತ್ರೆಗೆ ಕಮಿಷನರ್ ಲಾಬೂರಾಮ್ ಏರ್ ಲಿಫ್ಟ್

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 6:52 IST
Last Updated 12 ನವೆಂಬರ್ 2020, 6:52 IST
ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್
ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್   

ಹುಬ್ಬಳ್ಳಿ: ಅನಾರೋಗ್ಯದಿಂದಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಅವರನ್ನು ಬುಧವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

ತೀವ್ರ ಗಂಟಲು ನೋವಿನಿಂದ ಬಳಲುತ್ತಿದ್ದ ಅವರು, ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ 1ರ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಯಿತು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಿಸಿಪಿ ಆರ್.ಬಿ. ಬಸರಗಿ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT