ADVERTISEMENT

ಹುಬ್ಬಳ್ಳಿ: ಖಾದಿ ಉದ್ಯಮ ಪುನಶ್ಚೇತನಕ್ಕೆ ಬದ್ಧ -ಮುನೇನಕೊಪ್ಪ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2021, 12:39 IST
Last Updated 2 ಅಕ್ಟೋಬರ್ 2021, 12:39 IST
ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗದಲ್ಲಿರುವ ಗಾಂಧೀಜಿ ಪ್ರತಿಮೆಗೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಮಾಲಾರ್ಪಣೆ ಮಾಡಿದರು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಶಾಸಕ ಜಗದೀಶ ಶೆಟ್ಟರ್ ಇದ್ದಾರೆ
ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗದಲ್ಲಿರುವ ಗಾಂಧೀಜಿ ಪ್ರತಿಮೆಗೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಮಾಲಾರ್ಪಣೆ ಮಾಡಿದರು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಶಾಸಕ ಜಗದೀಶ ಶೆಟ್ಟರ್ ಇದ್ದಾರೆ   

ಹುಬ್ಬಳ್ಳಿ: ‘ಖಾದಿ ಉದ್ಯಮ ಪುನಶ್ಚೇತನಗೊಳ್ಳಬೇಕಿದೆ. ನೇಕಾರಿಕೆ ಪರಂಪರೆ ಉಳಿಯಬೇಕಿದೆ. ಸರ್ಕಾರ ಅದಕ್ಕೆ ಬದ್ಧವಾಗಿದ್ದು ಸಬ್ಸಿಡಿ, ಸಾಲ ಮನ್ನಾ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಪ್ರೋತ್ಸಾಹದಾಯಕ ಕಾರ್ಯಕ್ರಮಗಳ ಮೂಲಕ, ಉದ್ಯಮದ ಬೆಳವಣಿಗೆಗೆ ಶ್ರಮಿಸುತ್ತಿದೆ’ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಬೆಂಗೇರಿ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಶನಿವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗಾಂಧೀಜಿ ಅವರ ತತ್ವಾದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ಸ್ವದೇಶಿ ವಸ್ತುಗಳ ಬಳಕೆಗೆ ಗಾಂಧೀಜಿ ಮಹತ್ವ ನೀಡಿದ್ದರು. ಮೇಕ್ ಇನ್ ಇಂಡಿಯಾ ಘೋಷಣೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧೀಜಿ ಅವರ ಸ್ವದೇಶಿ ತತ್ವವನ್ನು ಪಾಲಿಸುತ್ತಿದ್ದಾರೆ. ಖಾದಿ ಬಟ್ಟೆಗಳನ್ನು ಧರಿಸುವ ಜೊತೆಗೆ, ಈ ಉದ್ಯಮದ ಬೆಂಬಲಕ್ಕೆ ಎಲ್ಲರೂ ನಿಲ್ಲಬೇಕು’ ಎಂದರು.

ADVERTISEMENT

ಗ್ರಾಮೋದ್ಯೋಗದ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಖಂಡೇಕಾರ, ಸಂತೋಷ ಚವ್ಹಾಣ, ವೀರಣ್ಣ ಸವಡಿ, ಗೋಪಾಲ ಬದ್ದಿ, ಮನೋಜ ಪಾಟೀಲ, ಈಶ್ವರಗೌಡ ಪಾಟೀಲ್, ಎಂ.ವೈ. ನರಗುಂದ, ದತ್ತಮೂರ್ತಿ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.