ಬಸವರಾಜ ಹೊರಟ್ಟಿ
ಹುಬ್ಬಳ್ಳಿ: ಬ್ರಿಟಿಷ್ ಕಾಮನ್‌ವೆಲ್ತ್ ಗಣರಾಜ್ಯವಾಗಿರುವ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್ ನಗರದಲ್ಲಿ ಅ.10ರಂದು ಮುಕ್ತಾಯವಾಗುವ 68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗಿಯಾಗಿದ್ದರು.
ಅ.6ರಿಂದ ಸಮಾವೇಶ ಆರಂಭವಾಗಿದ್ದು, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ, ರಾಜ್ಯಸಭೆ ಉಪಸಭಾಪತಿ ಹರಿವಂಶ್ ಸಿಂಗ್ ಪಾಲ್ಗೊಂಡಿದ್ದರು.
ವಿವಿಧ ದೇಶಗಳ ಪ್ರತಿನಿಧಿಗಳು, ವಿವಿಧ ರಾಜ್ಯಗಳ ವಿಧಾನಸಭೆ ಅಧ್ಯಕ್ಷರು, ವಿಧಾನ ಪರಿಷತ್ತಿನ ಸಭಾಪತಿಗಳು, ಸಚಿವರು, ರಾಜಕೀಯ ತಜ್ಞರು ಹಾಗೂ ಗಣ್ಯರು ಪಾಲ್ಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.