ADVERTISEMENT

ಹುಬ್ಬಳ್ಳಿ ಗಲಭೆ: ಠಾಣೆ, ಹಾನಿಗೊಂಡ ದೇಗುಲ ಪರಿಶೀಲನೆ

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಜೀಂ, ಕಾರ್ಯದರ್ಶಿ ನಜೀರ್ ಭೇಟಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 5:08 IST
Last Updated 21 ಏಪ್ರಿಲ್ 2022, 5:08 IST
   

ಹುಬ್ಬಳ್ಳಿ: ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮದ್ ನಜೀರ್ ಅವರು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ, ಗಲಭೆ ಕುರಿತು ಮಾಹಿತಿ ಪಡೆದರು.

ನಂತರ, ದಿಡ್ಡಿ ಓಣಿಯ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ, ಹಾನಿಯನ್ನು ಪರಿಶೀಲಿಸಿದರು. ದೇಗುಲದ ಟ್ರಸ್ಟಿ ಮತ್ತು ಅರ್ಚಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು.ಮುಂದೆ ಹೀಗಾಗದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ. ಎನ್.ಆರ್. ಪುರುಷೋತ್ತಮ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.