ADVERTISEMENT

ಬಾಲಕಿ ಕುಟುಂಬಕ್ಕೆ ಪರಿಹಾರಕ್ಕೆ ಸೂಚನೆ: ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 15:40 IST
Last Updated 29 ಸೆಪ್ಟೆಂಬರ್ 2020, 15:40 IST

ಹುಬ್ಬಳ್ಳಿ: ‘ನಗರದ ಇಂದಿರಾ ಗಾಜಿನಮನೆ ಉದ್ಯಾನದಲ್ಲಿರುವ ಮಳೆ ನೀರು ಇಂಗು ಗುಂಡಿಗೆ ಬಿದ್ದು ಮೃತಪಟ್ಟ ಬಾಲಕಿ ಕುಟುಂಬಕ್ಕೆ ಪರಿಹಾರ ನೀಡುವಂತೆ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ’ ಎಂದು ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾಲಕಿ ಸಾವು ದುರದೃಷ್ಟಕರ. ಮುಂದೆ ಇಂತಹ ಅನಾಹುತಗಳು ಸಂಭವಿಸದಂತೆ, ಕಾಮಗಾರಿಗಳು ನಡೆಯುವ ಜಾಗದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ’ ಎಂದರು.

ಸಾಂತ್ವನ:

ADVERTISEMENT

ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್ ಬಾಲಕಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸೆ. 28ರಂದು ಇಂದಿರಾ ಗಾಜಿನಮನೆ ಉದ್ಯಾನದ ಮಳೆ ನೀರು ಇಂಗು ಗುಂಡಿ ಬಳಿ ಆಟವಾಡುತ್ತಿದ್ದ ಮೂವರು ಸಹೋದರಿಯರು, ಗುಂಡಿಗೆ ಬಿದ್ದಿದ್ದರು. ಈ, ಪೈಕಿ ತ್ರಿಶಾ ಯರಂಗಳಿ ಮೃತಪಟ್ಟಿದ್ದಳು. ಉಳಿದ ಇಬ್ಬರನ್ನು ಉದ್ಯಾನದ ಭದ್ರತಾ ಸಿಬ್ಬಂದಿ ರಕ್ಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.