ಹುಬ್ಬಳ್ಳಿ: ‘ಕಾಂಗ್ರೆಸ್ ಮುಖಂಡ ಕೆ.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವ ಮೂಲಕ ಕಾಂಗ್ರೆಸ್, ತನ್ನ ಪಕ್ಷದಲ್ಲಿ ದಲಿತರಿಗೆ ಅವಕಾಶವಿಲ್ಲ ಎನ್ನುವ ಸಂದೇಶ ಸಾರಿದೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಟೀಕಿಸಿದರು.
ಶುಕ್ರವಾರ ಮಾಧ್ಯದವರೊಂದಿಗೆ ಮಾತನಾಡಿದ ಅವರು, ‘ರಾಜಣ್ಣ ಅವರು ಕಾಂಗ್ರೆಸ್‌ನ ಹಿರಿಯ ನಾಯಕ. ಅವರ ಹಿರಿತನಕ್ಕೂ ಬೆಲೆ ನೀಡದೆ, ಅಗೌರವವಾಗಿ ನಡೆಸಿಕೊಳ್ಳಲಾಗಿದೆ. ಮತಕಳ್ಳತನದ ಆರೋಪದ ಬಗ್ಗೆ ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದರು. ಅದನ್ನು ಸಹಿಸಲಾಗದ ಸಿಎಂ ಸಿದ್ದರಾಮಯ್ಯ ಅವರು, ರಾಜೀನಾಮೆ ಸಹ ನೀಡಲು ಅವಕಾಶ ಕೊಡದೆ ಸಚಿವ ಸ್ಥಾನದಿಂದ ವಜಾ ಮಾಡಿದ್ದಾರೆ’ ಎಂದರು.
‘ಬಿ.ಎಸ್. ಯಡಿಯೂರಪ್ಪ ಅವರನ್ನು ಅಂದಿನ ಬಿಜೆಪಿ ಸರ್ಕಾರ ವಜಾ ಮಾಡಿಲ್ಲ. ಎರಡನೇ ಹಂತದ ನಾಯಕರಿಗೆ ಬೆಳೆಯುವ ಅವಕಾಶ ನೀಡಲೆಂದು, ಅವರೇ ಸ್ವಂತ ನಿರ್ಧಾರ ತೆಗೆದುಕೊಂಡಿದ್ದರು. ಕಾಂಗ್ರೆಸ್‌ಗೂ ಬಿಜೆಪಿಗೂ ಅಜಗಜಾಂತರವಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.