ಹುಬ್ಬಳ್ಳಿ:ಹುಬ್ಬಳ್ಳಿಯ ಕಿಮ್ಸ್ ಪ್ರವೇಶ ದ್ವಾರದ ಬಳಿ ಇರುವ ಗಾಂಧೀಜಿ ಪ್ರತಿಮೆಯ ನಿರ್ವಹಣೆಯ ಬಗ್ಗೆ ಮಹಾನಗರ ಪಾಲಿಕೆ ನಿರ್ಲಕ್ಷ್ಯ ತೋರಿದೆ ಎಂದು ಆರೋಸಿ, ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಿಮ್ಸ್ ಬಳಿ ಸಾಂಕೇತಿಕ ಧರಣಿ ನಡೆಯಿತು.
ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಧರಣಿಯಲ್ಲಿ ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ, ಮುಖಂಡರಾದ ನವೀದ್ ಮುಲ್ಲಾ,ಅಬ್ದುಲ್ ಗನಿ ವಲಿಅಹ್ಮದ, ಸಾಗರ ಹಿರೇಮನಿ, ಗೌರಿ ನಾಗರಾಜ ಮುಂತಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.