ADVERTISEMENT

ಹುಬ್ಬಳ್ಳಿ: ಆಹಾರ ಧಾನ್ಯ ಪಡೆಯಲು ನೂಕುನುಗ್ಗಲು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 7:11 IST
Last Updated 6 ಏಪ್ರಿಲ್ 2020, 7:11 IST
ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು
ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು   

ಹುಬ್ಬಳ್ಳಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಅನಿಲಕುಮಾರ್ ಪಾಟೀಲ ಅವರು ಬಡವರಿಗೆ ಆಹಾರ ಧಾನ್ಯ ಮತ್ತು ಕಲ್ಲಂಗಡಿ ಹಣ್ಣು ವಿತರಿಸಿದರು.

ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಜತೆಗೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು, ಪಾಟೀಲ ಅವರ ಮನೆ ಎದುರು ಸರದಿಯಲ್ಲಿ ಬಿಸಿಲು ಲೆಕ್ಕಿಸದೆ ನಿಂತಿದ್ದರು.

ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.