ADVERTISEMENT

ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ; ಉಮಾಶ್ರೀ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 6:49 IST
Last Updated 27 ಜುಲೈ 2022, 6:49 IST
ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ; ಉಮಾಶ್ರೀ ಆಕ್ರೋಶ
ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ; ಉಮಾಶ್ರೀ ಆಕ್ರೋಶ   

ಹುಬ್ಬಳ್ಳಿ: ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ ಜಾರಿಗೆ ತಂದು ದೇಶದ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಬೆಂಗೇರಿಯಲ್ಲಿರುವ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಧ್ವಜ ಸಂಹಿತೆ ತಿದ್ದುಪಡಿ ಆತಂಕದ ವಿಷಯವಾಗಿದೆ. ಖಾದಿ ತ್ರಿವರ್ಣ ಧ್ವಜ ಭಾರತೀಯರ ಸ್ವಾಭಿಮಾನದ ಸಂಕೇತ. ಅದನ್ನು ಸಿದ್ಧಪಡಿಸಲು ಮಾನದಂಡಗಳಿವೆ. ಅದರ ಜೊತೆ ಜನರಲ್ಲಿ ಅವಿನಾಭಾವ ಸಂಬಂಧಗಳು ಅಡಗಿದೆ ಎಂದರು.

ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂಭ್ರಮದ ಹೆಸರಲ್ಲಿ ಭಾವೈಕ್ಯತೆಗೆ ಧಕ್ಕೆ ತರುವುದು ಸರಿಯಲ್ಲ. ಕೂಡಲೇ ತಿದ್ದುಪಡಿ ಕೈಬಿಡಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.