Santosh lad
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲಿಬಾನ್ ರೀತಿಯ ಆಡಳಿತ ನಡೆಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಜೋಶಿ ವಿರುದ್ಧ ಘೋಷಣೆ ಕೂಗಿದರು.
ಸಚಿವ ಸಂತೋಷ್ ಲಾಡ್ ಮಾತನಾಡಿ, ತಾಲಿಬಾನ್ ರೀತಿಯ ಸರ್ಕಾರ ಎಂಬ ಹೇಳಿಕೆಯನ್ನು ಜೋಶಿ ಅವರು ವಾಪಸ್ ಪಡೆಯಬೇಕು. ಪುಲ್ವಾಮಾ ಸಂದರ್ಭದಲ್ಲಿ 300 ಕೆ.ಜಿ ಆರ್ ಡಿಎಕ್ಸ್ ದೇಶದೊಳಕ್ಕೆ ಹೇಗೆ ಎಂಬ ಕುರಿತು ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.
ಮುಖಂಡ ದೀಪಕ್ ಚಿಂಚೋರೆ ಮಾತನಾಡಿ, ಒಂದು ವಾರದೊಳಗೆ ಜೋಶಿ ಅವರು ಹೇಳಿಕೆ ವಾಪಸ್ ಪಡೆಯದಿದ್ದರೆ ಅವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರಲ್ಹಾದ ಜೋಶಿ ಅವರು ಹಾವೇರಿ ಜಿಲ್ಲೆಯ ತಡಸ ಗ್ರಾಮದಲ್ಲಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.