ADVERTISEMENT

ಬೆಳೆ ಪರಿಹಾರಕ್ಕೆ ಆಗ್ರಹ: ರಸ್ತೆ ತಡೆ

ಎನ್.ಹೆಚ್. ಕೋನರಡ್ಡಿ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 3:50 IST
Last Updated 7 ಸೆಪ್ಟೆಂಬರ್ 2022, 3:50 IST
ಅತಿವೃಷ್ಟಿ, ‍ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು
ಅತಿವೃಷ್ಟಿ, ‍ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು   

ನವಲಗುಂದ: ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ, ಮನೆಗಳಿಗೆ ಹಾನಿಯಾಗಿದ್ದು ಸರ್ಕಾರ ಕೂಡಲೇ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಎನ್‌.ಎಚ್‌. ಕೋನರಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು. ಮನೆ ಕಳೆದುಕೊಂಡವರಿಗೆ ₹ 5 ಲಕ್ಷ ಪರಿಹಾರ ಘೋಷಣೆ ಮಾಡಬೇಕು. ಒಂದು ವಾರದಲ್ಲಿ ಎಲ್ಲ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಕೋನರಡ್ಡಿ ಆಗ್ರಹಿಸಿದರು.

‘ನಾನು ಶಾಸಕ ಆಗಿದ್ದಾಗ ನವಲಗುಂದ ಶಾನವಾಡ ನಡುವೆ ಬೆಣ್ಣಿಹಳ್ಳಕ್ಕೆ ಸೇತುವೆ ನಿರ್ಮಾಣಕ್ಕೆ ₹ 13 ಕೋಟಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿದ್ದೆ, 4 ವರ್ಷ ಕಳೆದರೂ ಕಾಮಗಾರಿ ಪೂರ್ಣವಾಗಿಲ್ಲ’ ಎಂದು ಆರೋಪಿಸಿದರು.

ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ, ಸುರೇಶ ಮೇಟಿ, ಜೀವನ ಪವಾರ, ಮೋದಿನಸಾಬ ಶಿರೂರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.