ADVERTISEMENT

ಇ.ಡಿ ದುರ್ಬಳಕೆ ಆರೋಪ; ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 7:01 IST
Last Updated 17 ಜೂನ್ 2022, 7:01 IST
ಹುಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಶುಕ್ರವಾರ ನವನಗರದ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹುಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಶುಕ್ರವಾರ ನವನಗರದ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.   

ಹುಬ್ಬಳ್ಳಿ: 'ಕೇಂದ್ರ ಬಿಜೆಪಿ ಸರ್ಕಾರ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ' ಎಂದು ಆರೋಪಿಸಿ ಹುಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಶುಕ್ರವಾರ ನವನಗರದ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ಎಐಸಿಸಿ ಸದಸ್ಯ ದೀಪಕ ಚಿಂಚೋರೆ, 'ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಯನ್ನು ಸ್ವಾರ್ಥ ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಮುಖಂಡರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ' ಎಂದು ಆರೋಪಿಸಿದರು.

ADVERTISEMENT

ಶಾಸಕಿ ಕುಸುಮಾವತಿ ಶಿವಳ್ಳಿ, ಹುಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅನೀಲಕುಮಾರ ಪಾಟೀಲ, ರಜತ್ ಉಳ್ಳಾಗಡ್ಡಿಮಠ, ಅಲ್ತಾಫ್ ಹಳ್ಳೂರು, ಸದಾನಂದ ಡಂಗನವರ, ನಾಗರಾಜ ಗೌರಿ, ದೀಪಾ ಗೌರಿ, ಬಸವರಾಜ ಕಿತ್ತೂರ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.