ADVERTISEMENT

ದಯಾಮರಣ ಕೋರಿ ರಾಷ್ಟ್ರಪತಿಗೆ ಗುತ್ತಿಗೆದಾರ ಪತ್ರ: ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 8:54 IST
Last Updated 31 ಅಕ್ಟೋಬರ್ 2022, 8:54 IST
   

ಹುಬ್ಬಳ್ಳಿ: ಕೋವಿಡ್ ಪರಿಕರ ಪೂರೈಕೆಗೆ ಸಂಬಂಧಿಸಿದ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ದಯಾಮರಣ ಕೋರಿ ರಾಷ್ಟ್ರಪತಿಗೆ ಗುತ್ತಿಗೆದಾರ ಪತ್ರ ಬರೆದ ಘಟನೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಾರ್ಯಕರ್ತರು ನಗರದ ಬಿಜೆಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕಚೇರಿಯಲ್ಲಿ ಬಿಜೆಪಿಯು ಎಸ್ ಎಸ್ ಕೆ ಸಮಾಜದ ಸಹಸ್ರಾರ್ಜುನ ಮಹಾರಾಜರ ಜಯಂತಿ ಆಚರಣೆ ನಡೆಯುತ್ತಿದ್ದ ಸಂದರ್ಭದಲ್ಲಿ, ವಿದ್ಯಾನಗರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ, ಮಹಾನಗರ ಪಾಲಿಕೆ ಸದಸ್ಯ ಇಮ್ರಾನ್ ಯಲಿಗಾರ ಹಾಗೂ ಕೆಲ ಕಾರ್ಯಕರ್ತರು ಪ್ರತಿಭಟಿಸಿದರು. ರಾಜ್ಯದಲ್ಲಿರುವುದು ಶೇ 40 ಪರ್ಸೆಂಟ್ ಸರ್ಕಾರ ಎಂದು ಘೋಷಣೆಗಳನ್ನು ಕೂಗಿದರು‌. ಪರ್ಸೆಂಟೇಜ್ ಸರ್ಕಾರ ಎಂಬ ಪೋಸ್ಟರ್ ಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಯಾಗಿ ಬಿಜೆಪಿ‌ ಕಾರ್ಯಕರ್ತರು ಭಾರತ ಮಾತಾಕಿ ಜೈ, ಸಹಸ್ರಾರ್ಜುನ ಮಹಾರಾಜ್ ಕೀ ಜೈ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ನವರು ತಂದಿದ್ದ ಪೋಸ್ಟರ್ ಗಳನ್ನು ಹರಿದು ಹಾಕಿ ಕುಣಿದರು.

ADVERTISEMENT

ಈ ಸಂದರ್ಭದಲ್ಲಿ ಕೆಲ ಹೊತ್ತು ಉದ್ವಿಗ್ನತೆ ಉಂಟಾಗಿತು. ಉಪನಗರ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿತಿಳಿಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.