ADVERTISEMENT

ಹುಬ್ಬಳ್ಳಿ BJPಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 7:45 IST
Last Updated 18 ಡಿಸೆಂಬರ್ 2025, 7:45 IST
<div class="paragraphs"><p>ಹುಬ್ಬಳ್ಳಿ BJP ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ</p></div>

ಹುಬ್ಬಳ್ಳಿ BJP ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

   

ಹುಬ್ಬಳ್ಳಿ: ಇಲ್ಲಿನ ಅರವಿಂದನಗರದಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಹೆಸರಿಗೆ ಕಳಂಕ ತರಲು ಬಿಜೆಪಿ ಪಿತೂರಿ ನಡೆಸಿದೆ ಎಂದು ಮುಖಂಡರು ಆರೋಪಿಸಿದರು.

ADVERTISEMENT

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿಜೆಪಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಕಚೇರಿಯ ಸ್ವಲ್ಪ ದೂರದಲ್ಲೇ ಬ್ಯಾರಿಕೇಡ್ ಹಾಕಿದ್ದ ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದರು. ಬ್ಯಾರಿಕೇಡ್ ಹತ್ತಿ, ನುಗ್ಗಲು ಯತ್ನಿಸಿದವರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫಹುಸೇನ ಹಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.