ADVERTISEMENT

ಕೆರೆಗಳ ಸಂರಕ್ಷಣೆಗೆ ಆದ್ಯತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 15:56 IST
Last Updated 24 ಜುಲೈ 2021, 15:56 IST
ಅಳ್ನಾವರ ಸಮೀಪದ ಹೂಲಿಕೇರಿ ಗ್ರಾಮದ ಇಂದಿರಮ್ಮನ ಕರೆ ಹಾನಿ ಪ್ರದೇಶಕ್ಕೆ ಶನಿವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌, ಶಾಸಕ ಸಿ.ಎಂ. ನಿಂಬಣ್ಣವರ ಭೇಟಿ ನೀಡಿದರು
ಅಳ್ನಾವರ ಸಮೀಪದ ಹೂಲಿಕೇರಿ ಗ್ರಾಮದ ಇಂದಿರಮ್ಮನ ಕರೆ ಹಾನಿ ಪ್ರದೇಶಕ್ಕೆ ಶನಿವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌, ಶಾಸಕ ಸಿ.ಎಂ. ನಿಂಬಣ್ಣವರ ಭೇಟಿ ನೀಡಿದರು   

ಅಳ್ನಾವರ: ಅತಿವೃಷ್ಟಿಯಿಂದ ಹಾನಿಗೊಳಗಾದ ಕೆರೆಗಳ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಳೆಗೆ ತಡೆಗೋಡೆ ಒಡೆದು ಹಾನಿಗೊಳಗಾದ ಸಮೀಪದ ಹೂಲಿಕೇರಿ ಗ್ರಾಮದ ಇಂದಿರಮ್ಮನ ಕೆರೆಗೆ ಶನಿವಾರ ಭೇಟಿ ನೀಡಿ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿ ‘ಎರಡು ವರ್ಷಗಳ ಹಿಂದೆ ಹಾನಿಗೊಳಗಾದ ಈ ಕೆರೆ ಅಭಿವೃದ್ಧಿಗೆ ₹4 ಕೋಟಿ ಅನುದಾನದಲ್ಲಿ ನೀಲನಕ್ಷೆ ತಯಾರಿಸಲಾಗಿತ್ತು. ಕೋವಿಡ್‌ ಕಾರಣದಿಂದ ಅನುದಾನ ಬಿಡುಗಡೆ ವಿಳಂಬವಾಗಿತ್ತು. ಇದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸಲಾಗುವುದು’ ಎಂದರು.

ADVERTISEMENT

ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿ ‘ಈ ಭಾಗದ ದೊಡ್ಡ ಇಂದಿರಮ್ಮನ ಕೆರೆ ಅಭಿವೃದ್ಧಿಗೆ ₹10 ಕೋಟಿ ಬೇಕು ಎಂದು ಅಂದಾಜಿಸಲಾಗಿದೆ. ಜಮೀನು ಕೊರೆತ ತಡೆಯಲು ಯೋಜನೆ ರೂಪಿಸಲಾಗುವದು’ ಎಂದರು.

ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ, ಕೆರೆ ಬಳಕೆದಾರರ ಸಂಘದ ಅಧ್ಯಕ್ಷ ಶಿವಾಜಿ ಡೊಳ್ಳಿನ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಉಪ ವಿಭಾಗಾಧಿಕಾರಿ ಗೋಪಾಲಕೃಷ್ಣ. ಲೋಕೋಪಯೋಗಿ ಕಾರ್ಯ ನಿರ್ವಾಹಕ ಎಂಜಿನಿಯರ್‌ ಎಸ್.ಬಿ. ಚೌಡಣ್ಣವರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ತಹಶೀಲ್ದಾರ್ ಅಮರೇಶ ಪಮ್ಮಾರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪಿ.ಕೆ ಗುಡದಾರಿ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್, ವಿನಾಯಕ ಹರನಟ್ಟಿ, ನಟೇಶ, ಹೋರ್ತಿಕರ, ಅಮೃತ ಸೋಳಂಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.