
ಧಾರವಾಡ: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಬಳಗವು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ‘ಸಂವಿಧಾನವೇ ಬೆಳಕು’ ಅಭಿಯಾನದಡಿ ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರುವರಿ 6ರಂದು ಬೆಳಿಗ್ಗೆ 7ರಿಂದ ಸಂವಿಧಾನ ಕುರಿತು ವಿಚಾರ ಸಂಕಿರಣ ಮತ್ತು ವಾಕಥಾನ್ ಕಾರ್ಯಕ್ರಮ ಹಮ್ಮಿಕೊಂಡಿದೆ.
ಸಂವಿಧಾನದ ಮಹತ್ವವನ್ನು ಯುವಜನರಿಗೆ ತಿಳಿಪಡಿಸುವುದು ‘ಸಂವಿಧಾನವೇ ಬೆಳಕು’ ಅಭಿಯಾನದ ಉದ್ದೇಶ. ಅಂದು ನಡೆಯುವ ವಿಚಾರ ಸಂಕಿರಣದಲ್ಲಿ ಸಂವಿಧಾನದ ಕುರಿತು ತಜ್ಞರು ವಿಶೇಷ ಉಪನ್ಯಾಸ ನೀಡುವರು. ಭಾರತೀಯರಿಗೆ ಸಂವಿಧಾನವು ಎಷ್ಟು ಮೌಲಿಕ ಮತ್ತು ಮುಖ್ಯವಾದದ್ದು ಎಂಬುದರ ಬಗ್ಗೆ ಅರಿವು ಮೂಡಿಸುವರು.
ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಸಂಯೋಜಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಇಲ್ಲಿ ನೀಡಲಾದ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕು.
ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿನ ಗಾಂಧಿ ಭವನದಲ್ಲಿ ವಿಚಾರ ಸಂಕಿರಣ ನಡೆಯಲಿದೆ. ನಂತರ ಮೂರು ಕಿ.ಮೀ. ವಾಕಥಾನ್ ಇರಲಿದೆ. ನೋಂದಣಿ ಮಾಡಿಕೊಂಡ ಪ್ರತಿಯೊಬ್ಬರಿಗೂ ಟಿ–ಶರ್ಟ್ ಮತ್ತು ಕ್ಯಾಪ್ ನೀಡಲಾಗುವುದು.
ಮಾಹಿತಿಗೆ ಸಂಪರ್ಕ ದೂರವಾಣಿ ಸಂಖ್ಯೆ: 8105015560
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.