ನವಲಗುಂದ: ‘ಡೆಂಗಿ ಸೇರಿದಂತೆ ಸಾಂಕ್ರಾಮಿಕ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು’ ಎಂದು ಅಳಗವಾಡಿ ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಶರಣಪ್ಪ ಕಡ್ಲಿಬಿಷ್ಠಿ ಹೇಳಿದರು.
ಅವರು ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಆರೋಗ್ಯ ಇಲಾಖೆಯಿಂದ ಅಂಗನವಾಡಿ ಕೇಂದ್ರ ನಂ.2ರಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
‘ಮಳೆ ನೀರು ಸರಾಗವಾಗಿ ಹರಿಯಲು ಅವಕಾಶ ನೀಡದಿದ್ದರೆ ಸಾಂಕ್ರಾಮಿಕ ಕಾಯಿಲೆ ಹರಡುವ ಸೊಳ್ಳೆಗಳ ಉತ್ಪತ್ತಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ.
‘ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜನರಿಗೆ ಅರಿವು ಮೂಡಿಸುತ್ತಾರೆ. ಸಾರ್ವಜನಿಕರು ಇದನ್ನು ಅರಿತುಕೊಂಡು ಜಾಗೃತರಾಗಿರಬೇಕು’. ‘ಡೆಂಗಿ ರೋಗವು ಸೊಳ್ಳೆಯಿಂದ ಹರಡುತ್ತದೆ. ರೋಗ ಹರಡದಂತೆ ನಿಯಂತ್ರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ’ ಎಂದರು.
ಅರೋಗ್ಯ ಸುರಕ್ಷಣಾಧಿಕಾರಿ ಶೋಭಾ ಪತ್ತಾರ, ಮಹಾರುದ್ರಪ್ಪ ಅರ್ಕಸಾಲಿ, ದೇವಪ್ಪ ಹೊಂಗಲ ಪಾಲ್ಗೊಂಡಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.