ADVERTISEMENT

ಅಂಚೆ ಕಚೇರಿಯಲ್ಲಿ ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆ

ಸೌಲಭ್ಯ ಬಳಸಿಕೊಳ್ಳಲು ಗ್ರಾಹಕರಿಗೆ ಕೋರಿಕೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2022, 2:51 IST
Last Updated 2 ಮಾರ್ಚ್ 2022, 2:51 IST

ಹುಬ್ಬಳ್ಳಿ: ಅಂಚೆ ಕಚೇರಿಯಲ್ಲಿ ಆನ್‌ಲೈನ್‌ ವಹಿವಾಟು ಸುಗಮಗೊಳಿಸಲು ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಈ ವರ್ಷದಲ್ಲಿ 1.5 ಲಕ್ಷ ಅಂಚೆ ಕಚೇರಿಗಳು ಸಂಪೂರ್ಣವಾಗಿ ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆಯಡಿ ಬರೆಯಲಿವೆ. ಇದರಿಂದಾಗಿ ನೆಟ್‌ ಬ್ಯಾಂಕಿಂಗ್‌, ಮೊಬೈಲ್‌ ಬ್ಯಾಂಕಿಂಗ್‌, ಎಸ್‌ಎಂಎಸ್ ಬ್ಯಾಂಕಿಂಗ್‌ ಮೂಲಕ ಆನ್‌ಲೈನ್‌ ನಿರ್ವಹಣೆ ಜೊತೆಗೆ ಅಂಚೆ ಖಾತೆ ಮತ್ತು ಬ್ಯಾಂಕ್‌ ಖಾತೆಗಳ ನಡುವೆ ಆನ್‌ಲೈನ್‌ ಮೂಲಕ ನಗದು ವರ್ಗಾವಣೆ ಸಾಧ್ಯವಾಗಲಿದೆ. ಗ್ರಾಮೀಣ ಪ್ರದೇಶದ ರೈತರು ಮತ್ತು ಹಿರಿಯ ನಾಗರಿಕರಿಗೆ ಹೆಚ್ಚು ಅನುಕೂಲವಾಗಲಿದೆ.

ಕೇಂದ್ರದ ಗ್ರಾಮೀಣ ಮಂತ್ರಾಲಯ ಬಜೆಟ್‌ನಲ್ಲಿ ಘೋಷಿಸಿದ್ದ ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆಯ ಅನುಷ್ಠಾನದ ಕುರಿತು ಈಚೆಗೆ ನಡೆದ ವೆಬಿನಾರ್‌ನಲ್ಲಿ ಕರ್ನಾಟಕ ಅಂಚೆ ವಲಯದ ಪ್ರಧಾನ ಪೋಸ್ಟ್‌ ಮಾಸ್ಟರ್‌ ಜನರಲ್‌ ಎಸ್‌. ರಾಜೇಂದ್ರಕುಮಾರ್ ಪಾಲ್ಗೊಂಡಿದ್ದರು.

ADVERTISEMENT

’ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆ ಗ್ರಾಮೀಣ ಮಟ್ಟದಲ್ಲಿ ಸಮನ್ವಯಗೊಳ್ಳಬೇಕು ಎನ್ನುವ ಅಂಶಕ್ಕೆ ಒತ್ತು ನೀಡಲಾಯಿತು. ಗ್ರಾಮೀಣ ಭಾಗದ ಡಿಜಿಟಲ್‌ ಆರ್ಥಿಕತೆ ಒಳಗೊಳ್ಳುವಿಕೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳುವಿಕೆ ಕುರಿತು ಜಾಗೃತಿ ಮೂಡಿಸಬೇಕು. ಹಳ್ಳಿಗಳಲ್ಲಿರುವ ಅಂಚೆ ಕಚೇರಿಯ ಶಾಖೆಗಳನ್ನೂ ಸೇರಿಸಿ ಎಲ್ಲ ಕಚೇರಿಗಳು ಕೋರ್‌ ಬ್ಯಾಂಕಿಂಗ್‌ ಅಡಿಯಲ್ಲಿ ಬರುವಂತೆ ಮಾಡಬೇಕು. ದೇಶದ ಎಲ್ಲಾ ಭಾಗಕ್ಕೂ ಸುಲಭವಾಗಿ ಹಣ ತಲುಪುವ ವ್ಯವಸ್ಥೆ ಮಾಡಬೇಕು’ ಎಂದು ರಾಜೇಂದ್ರಕುಮಾರ್‌ ತಿಳಿಸಿದ್ದಾರೆ.

‘ಕಳೆದ ಆರ್ಥಿಕ ವರ್ಷದಲ್ಲಿ 28 ಲಕ್ಷ ಫಲಾನುಭವಿಗಳಿಗೆ ಅಂಚೆ ಖಾತೆ ಮೂಲಕ ಸಾಮಾಜಿಕ ಭದ್ರತಾ ಪಿಂಚಣಿ ತಲುಪಿಸಲಾಗಿದೆ. ಈಗ ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ವೇಗವಾಗಿ ಅಳವಡಿಸಿಕೊಳ್ಳಲಿದೆ’ ಎಂದು ಅವರು ಹೇಳಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.