ಹುಬ್ಬಳ್ಳಿ: ತಾಲ್ಲೂಕಿನ ಬಂಡಿವಾಡ ಕ್ರಾಸ್‌ನಲ್ಲಿ ನಾಲ್ಕು ದಿನಗಳ ಹಿಂದೆ ಪತ್ನಿ ಶಾರವ್ವ ಎಚ್. ಕುರ್ಡಿಕೇರಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ಅವರ ಪತಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ ಕೆಲ ವರ್ಷಗಳಿಂದ ಗಂಡ, ಹೆಂಡತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಮನಸ್ತಾಪದಿಂದಾಗಿ ಪತ್ನಿಯನ್ನೇ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದರು. ಆರೋಪಿಯನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿ ಬಂಡಿವಾಡದ ಠಾಣೆಯಲ್ಲಿರಿಸಿದ್ದರು. ಬಳಿಕ ಕಿಮ್ಸ್‌ಗೆ ಕರೆದುಕೊಂಡು ಹೋಗಿ ಗಂಟಲು ಹಾಗೂ ದ್ರವದ ಪರೀಕ್ಷೆ ಮಾಡಿಸಿದ್ದರು.
ಗುರುವಾರ ಪರೀಕ್ಷಾ ವರದಿ ಬಂದಿದ್ದು, ಸೋಂಕು ಇರುವುದು ದೃಢವಾಗಿದೆ. ಇದನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಖಚಿತಪಡಿಸಿದ್ದಾರೆ. ಆರೋಪಿಯ ಜೊತೆ ಓಡಾಡಿದ್ದ ಒಟ್ಟು 15 ಪೊಲೀಸರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.