ADVERTISEMENT

ಹುಬ್ಬಳ್ಳಿ: ಕಿಮ್ಸ್‌ನಲ್ಲಿ ಕೋವಿಡ್ ರೋಗಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 13:39 IST
Last Updated 14 ಜೂನ್ 2021, 13:39 IST

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಹಳೇ ಹುಬ್ಬಳ್ಳಿಯ ನೇಕಾರ ಕಾಲೊನಿಯ ಚನ್ನಬಸವನಗೌಡ ಪಾಟೀಲ (78) ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಪಾಟೀಲ ಅವರಿಗೆ ಸೋಂಕು ದೃಢಪಟ್ಟಿತ್ತು. ನಂತರ ಮನೆಯವರು ಕಿಮ್ಸ್‌ಗೆ ದಾಖಲಿಸಿದ್ದರು. ಕೋವಿಡ್ ವಾರ್ಡ್ 303ರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಖಿನ್ನತೆಗೆ ಒಳಗಾಗಿದ್ದರು. ಅದೇ ಕಾರಣಕ್ಕೆ, ರಾತ್ರಿ 1ರ ಸುಮಾರಿಗೆ ಶೌಚಾಲಯದಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT