ADVERTISEMENT

ಧಾರವಾಡ ಎಸ್‌ಡಿಎಂನಲ್ಲಿ ಮತ್ತೆ 77 ಕೋವಿಡ್ ಪ್ರಕರಣ, ಸೋಂಕಿತರ ಸಂಖ್ಯೆ 281ಕ್ಕೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 3:51 IST
Last Updated 27 ನವೆಂಬರ್ 2021, 3:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಧಾರವಾಡ: ಇಲ್ಲಿನ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ ವೇಳೆಗೆ ಮತ್ತೆ 77 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಶುಕ್ರವಾರ ರಾತ್ರಿಯವರೆಗೆ 204 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ 77 ಮಂದಿ ಸೋಂಕಿತರಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.

ಎಲ್ಲರಿಗೂ ಚಿಕಿತ್ಸೆ, ಔಷಧೋಪಚಾರ ನಡೆಯುತ್ತಿದೆ. ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. ಇನ್ನೂ 1,822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಜೆ. ಪಾಟೀಲ ತಿಳಿಸಿದ್ದಾರೆ.

ವರದಿಯಾಗಿರುವ 281 ಪ್ರಕರಣಗಳಲ್ಲಿ, ಕೇವಲ 6 ಜನರಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ. ಉಳಿದ 275 ಜನರಲ್ಲಿ ರೋಗದ ಲಕ್ಷಣಗಳು ಇಲ್ಲ. ಯಾವುದೇ ಸಾವು ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.