
ಪ್ರಜಾವಾಣಿ ವಾರ್ತೆಪ್ರಾತಿನಿಧಿಕ ಚಿತ್ರ
ಭಟ್ಕಳ: ನಗರದ ಶ್ರೀ ಚನ್ನಪಟ್ಟಣ ಹನುಮಂತ ದೇವಾಲಯ ಪಕ್ಕದ ಆವರಣದಲ್ಲಿ ನಿಂತಿದ್ದ ಹಸುವನ್ನು ದುಷ್ಕರ್ಮಿಗಳು ಕಾರಿನಲ್ಲಿ ತುಂಬಿಕೊಂಡು ಪರಾರಿಯಾದ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ದೇವಸ್ಥಾನದ ಆವರಣಕ್ಕೆ ನುಗ್ಗಿದ ಗೋ ಕಳ್ಳರು ಮಲಗಿದ್ದ ಹಸುವನ್ನು ಬಲವಂತವಾಗಿ ಎತ್ತಿ ಐಷಾರಾಮಿ ಕಾರಿನಲ್ಲಿ ಹಾಕಿಕೊಂಡು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಮುಂದುವರೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.