ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ಬೆಳಿಗ್ಗೆ ಇಬ್ಬರಿಗೆ ಚಾಕು ಇರಿದು ಗಾಯಗೊಳಿಸಲಾಗಿದೆ.
ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರಿಗೆ ಚಾಕು ಇರಿಯಲಾಗಿದ್ದು, ಶೋಯೆಬ್ ಅಬ್ಬನ್ನವರ (24) ಎಂಬುವವರಿಗೆ ಗಾಯಗೊಳಿಸಲಾಗಿದೆ.. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕೇಶ್ವಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧವ ನಗರದಲ್ಲಿ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ. ಹಳೆ ವೈಷಮ್ಯದ ಕಾರಣಕ್ಕೆ ಈ ಘಟನೆಗಳು ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.