ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಬುಧವಾರ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ತೋರಿಸಲಾಯಿತು.
ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಎರಡು ದೊಡ್ಡ ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿದ್ದು, ಒಂದು ಪರದೆಯಲ್ಲಿ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮ, ಇನ್ನೊಂದು ಪರದೆಯಲ್ಲಿ ಝೂಮ್ ಆ್ಯಪ್ ಮೂಲಕ ಕೆಪಿಸಿಸಿಯಿಂದ ಪ್ರಸಾರ ಇರುತ್ತದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.
ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ಚಾಲನೆ ನೀಡಿದರು. ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.