
ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಕುಟುಂಬದವರನ್ನು ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳು ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಅವರು ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಗುರುವಾರ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು
ಹುಬ್ಬಳ್ಳಿ: ‘ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕಾಗಿದೆ. ಇದಕ್ಕಾಗಿ ಖುದ್ಧಾಗಿ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸುವೆ’ ಎಂದು ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳು ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಹೇಳಿದರು.
ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಗುರುವಾರ ಸಂತ್ರಸ್ತ ಕುಟುಂಬದವರ ಆರೋಗ್ಯ ವಿಚಾರಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಇಂತಹ ಅಮಾನವೀಯ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಸರ್ಕಾರದ ಗಮನ ಸೆಳೆಯುವೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಕೊಡಿಸಲಾಗುವುದು. ಅವರು ಭಯಭೀತರಾಗಿದ್ದು, ಹೆಚ್ಚುವರಿ ಭದ್ರತೆ ಹಾಗೂ ಆರ್ಥಿಕ ನೆರವಿಗೆ ಯತ್ನಿಸಲಾಗುವುದು’ ಎಂದರು.
‘ಈ ಪ್ರಕರಣದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಕುರಿತು ಆರೋಪವಿದೆ. ದೂರುಗಳೂ ಸಹ ಸಲ್ಲಿಕೆಯಾಗಿವೆ. ಈ ಬಗ್ಗೆ ಚರ್ಚಿಸಿ, ಲೋಪ ಪತ್ತೆ ಮಾಡಿ, ಕ್ರಮ ಕೈಗೊಳ್ಳಲಾಗುವುದು’ ಎಂದರು.
ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಇಂದು ನಡೆಯುವ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕಾಗಿ ಸಿಎಂಗೆ ಒತ್ತಾಯಿಸಲಾಗುವುದುರಮೇಶ ಜಾರಕಿಹೊಳಿ,ಸದಸ್ಯ, ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳು ಆಯೋಗ
ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ತೀವ್ರಗೊಳಿಸಲಿ. ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಹಾಗೂ ಭದ್ರತೆ ಒದಗಿಸಿ, ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ನೀಡಬೇಕುಪ್ರಲ್ಹಾದ ಜೋಶಿ, ಕೇಂದ್ರ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.