ಧಾರವಾಡ: ದಸರಾ ಉತ್ಸವದ ಅಂಗವಾಗಿ ನಡೆಯುವ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕಡಪಾ ಮೈದಾನದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ದಸರಾ ಜಂಬೂ ಸವಾರಿ ಉತ್ಸವ ಸಮಿತಿಯವರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಡಪಾ ಮೈದಾನದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ದಸರಾ ಅಂಗವಾಗಿ 20 ವರ್ಷಗಳಿಂದ ಕಡಪಾ ಮೈದಾನವನ್ನು ಬಾಡಿಗೆ ಪಡೆದು ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಬಾರಿ ಕೆಲವರ ಒತ್ತಡದಿಂದ ಮೈದಾನವನ್ನು ಬಾಡಿಗೆಗೆ ನೀಡುತ್ತಿಲ್ಲ. ಕೂಡಲೇ ವಸ್ತು ಪ್ರದರ್ಶನಕ್ಕೆ ಅನುಮತಿ ನೀಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು.
ದಸರಾ ಜಂಬೂಸವಾರಿ ಉತ್ಸವ ಸಮಿತಿ ಅಧ್ಯಕ್ಷ ಗುರುರಾಜ್ ಹುಣಸಿಮರದ, ದಸರಾ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ, ಮಾಜಿ ಮೇಯರ್ ದಾನಪ್ಪ ಕಬ್ಬೇರ, ಪಾಲಿಕೆಯ ವಿರೋಧ ಪಕ್ಷದ ನಾಯಕ ಇಮ್ರಾನ ಯಲಿಗಾರ, ಶಂಭು ಸಾಲಮನಿ, ಗೌರಮ್ಮ ಬಳ್ಳೊಜಿ, ತುಳಜಪ್ಪ ಪೂಜಾರಿ, ನಾಗರಾಜ ಗುರಿಕಾರ, ಮಹಬೂಬ ಪಠಾಣ, ಆನಂದ ಮುಶ್ಯನ್ನವರ, ಯಾಶೀನ ಹಾವೇರಿಪೇಟ್, ವಿಠ್ಠಲ ಪಾಲನಕರ, ಗೀತಾ ತಾವಾಂಶಿ, ಲಕ್ಷ್ಮಿ ಗುತ್ತೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.