ADVERTISEMENT

ರೌಡಿ ಶೀಟರ್‌ ಪರಿಷ್ಕರಣೆಗೆ ನಿರ್ಧಾರ

ಪ್ರಜಾವಾಣಿ ವರದಿ ಫಲಶ್ರುತಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2019, 10:23 IST
Last Updated 3 ನವೆಂಬರ್ 2019, 10:23 IST

ಹುಬ್ಬಳ್ಳಿ: ಅವಳಿ ನಗರದಲ್ಲಿ ಅಪರಾಧ ಚಟುವಟಿಕೆಗಳಿಂದ ದೂರ ಇರುವವರ ಹೆಸರನ್ನು ರೌಡಿ ಪಟ್ಟಿಯಿಂದ ತೆಗೆಯಲು ಮತ್ತು ಹೊಸಬರನ್ನು ಈ ಪಟ್ಟಿಗೆ ಸೇರಿಸಲು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಕಮಿಷನರೇಟ್‌ ತೀರ್ಮಾನಿಸಿದೆ.

‘ರೌಡಿಗಳ ಸಂಖ್ಯೆ 2 ಸಾವಿರಕ್ಕೂ ಅಧಿಕ!’ ಎಂಬ ಶಿರ್ಷಿಕೆಯಲ್ಲಿ ‘ಪ್ರಜಾವಾಣಿ’ ಅ. 27ರಂದು ವಿಶೇಷ ವರದಿ ಪ್ರಕಟಿಸಿತ್ತು. ಹತ್ತು ವರ್ಷಗಳಿಂದ ಅವಳಿ ನಗರದಲ್ಲಿ ‘ರೌಡಿ ಪಟ್ಟಿ ಪರಿಷ್ಕರಣೆಯಾಗಿಲ್ಲ’ ಎಂಬ ಅಂಶವನ್ನು ವರದಿಯಲ್ಲಿ ಗಮನ ಸೆಳೆಯಲಾಗಿತ್ತು. ಈ ವರದಿಯಿಂದ ಎಚ್ಚೆತ್ತ ಪೊಲೀಸ್‌ ಇಲಾಖೆ, ಕಮಿಷನರೇಟ್‌ ವ್ಯಾಪ್ತಿಯ 14 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಈ ಕುರಿತು ಮಾಹಿತಿ ಕಲೆ ಹಾಕಲು ಮುಂದಾಗಿದೆ.

ಪೊಲೀಸ್‌ ಕಮಿಷನರ್‌ ಆರ್‌. ದಿಲೀಪ್‌ ಸೂಚನೆ ಮೇರೆಗೆ ಕಾರ್ಯ ಪ್ರವೃತ್ತರಾಗಿರುವ ಡಿಸಿಪಿ ನಾಗೇಶ, ಎಲ್ಲ ಪೊಲೀಸ್‌ ಠಾಣೆಗಳಿಂದ ರೌಡಿಗಳ ಪಟ್ಟಿಯನ್ನು ಸಂಗ್ರಹಿಸುತ್ತಿದ್ದಾರೆ. ಅಲ್ಲದೆ, ಅವರ ಈಗಿನ ಕಾರ್ಯ ಚಟುವಟಿಕೆಗಳ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಠಾಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ADVERTISEMENT

ರೌಡಿ ಪಟ್ಟಿಯಲ್ಲಿ ಹೆಸರು ಇದ್ದು, ಅಪರಾಧ ಚಟುವಟಿಕೆಗಳಿಂದ ದೂರ ಇರುವವರ ಹೆಸರನ್ನು ಪಟ್ಟಿಯಿಂದ ಕೈ ಬಿಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. 2010ರಿಂದ ಇಲ್ಲಿಯವರೆಗೆ ಅಪರಾಧ ಚಟುವಟಿಕೆಗಳಲ್ಲಿ ಪದೇ ಪದೇ ಕಾಣಿಸಿಕೊಂಡವರ ಹೆಸರನ್ನು ಇದುವರೆಗೂ ಸೇರಿಸುತ್ತಾ ಹೋಗಲಾಗುತ್ತಿತ್ತೇ ವಿನಃ, ಅಪರಾಧ ಚಟುವಟಿಕೆಗಳಿಂದ ದೂರವಿದ್ದವರ ಹೆಸರನ್ನು ಕೈಬಿಟ್ಟಿರಲಿಲ್ಲ. ಪ್ರತೀ ಎರಡು ವರ್ಷಕ್ಕೊಮ್ಮೆ ಪಟ್ಟಿ ನವೀಕರಣಗೊಳಿಸಬೇಕು ಎನ್ನುವ ನಿಯಮಾವಳಿ ಪಾಲಿಸುತ್ತಿರಲಿಲ್ಲ. ಇದರಿಂದ ರೌಡಿಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.