ಬಂಧನ
(ಪ್ರಾತಿನಿಧಿಕ ಚಿತ್ರ)
ಹುಬ್ಬಳ್ಳಿ: ನಗರದಲ್ಲಿ ಸೆ. 5ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ರಾಷ್ಟ್ರಧ್ವಜ ವಿರೂಪಗೊಳಿಸಿದ್ದ ಪ್ರಕರಣದಲ್ಲಿ ಗೋಕುಲ ರಸ್ತೆ ಠಾಣೆ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
‘ಮೆರವಣಿಗೆಯಲ್ಲಿ ಕೆಲವರು ನಕ್ಷತ್ರ, ಅರ್ಧ ಚಂದ್ರಾಕೃತಿಯ ರಾಷ್ಟ್ರಧ್ವಜ ಪ್ರದರ್ಶಿಸಿದ್ದರು. ಮೂಲ ಸ್ವರೂಪಕ್ಕೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.