
ಹುಬ್ಬಳ್ಳಿ: ‘ರಾಜ್ಯದಲ್ಲಿ 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಲ್ಲಿ ಹೇಳಿದರು.
‘ಹಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಶೇ 60 ರಷ್ಟು ಬೋಧಕರ ಕೊರತೆ ಇದೆ. ಹೀಗಾಗಿ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12 ಸಾವಿರ, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 2,500 ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
‘ರಾಜಕೀಯ ಕಾರಣಕ್ಕೆ ಹೆಚ್ಚು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವ ಕಾರಣ ಅವುಗಳ ಸ್ಥಿತಿ ಶೋಚನೀಯವಾಗಿದೆ. ನಾವು ವಿದೇಶಿ ವಿಶ್ವವಿದ್ಯಾಲಯಗಳ ಮಾದರಿ ಅನುಸರಿಸಲು ಸಾಧ್ಯವಿಲ್ಲ’ ಎಂದರು.
‘ವಿದೇಶಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದಿಂದ ನಡೆಯುತ್ತವೆ. ಆದರೆ, ಇಲ್ಲಿ ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡಬೇಕಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.