ಧಾರವಾಡ: ‘ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಚಂದ್ರಕಾಂತ ಬೆಲ್ಲದ ಅವರು ಹಾಲಭಾವಿ ಹಾಗೂ ಪಂಡಿತ ಬಸವರಾಜ ರಾಜಗುರು ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕೋಶಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಂಜೀವ ಧಮಕನಾಳ ಒತ್ತಾಯಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಲ್ಲದ ಅವರು ಏಕಕಾಲದಲ್ಲಿ ಮೂರು ಟ್ರಸ್ಟ್‌ಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಎರಡು ಟ್ರಸ್ಟ್‌ಗಳಿಂದ ಬಿಡುಗಡೆಗೊಳಿಸುವಂತೆ ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸದಿದ್ದರೆ. ಈ ನಿಟ್ಟಿನಲ್ಲಿ ಅವರು ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ’ ಎಂದರು.
’ಸಂಘದ ಚುನಾವಣೆ ಡಿಸೆಂಬರ್‌ನಲ್ಲಿ ನಡೆಯಬೇಕಿತ್ತು. ಅದನ್ನು ಮುಂದೂಡಿದ್ದು ಯಾಕೆ ಎಂಬುದು ತಿಳಿಸಬೇಕು. ಸಂಘದ ಹಣಕಾಸಿನ ಚಟುವಟಿಕೆಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು’ ಎಂದು ಒತ್ತಾಯಿಸಿದರು.
‘ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಸಂಘವನ್ನು ಶಾಶ್ವತ ಅನುದಾನಕ್ಕೆ ಒಳಪಡಿಸುವಂತೆ ಎಲ್ಲ ಸಚಿವರಿಗೆ ಶಾಸಕರಿಗೆ ಪತ್ರ ಬರೆದರೂ ಯಾರೂ ಆಸಕ್ತಿ ತೋರಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ಯಾಕೆ ಹೋರಾಟ ಆಯೋಜಿಸಲಿಲ್ಲ’ ಎಂದು ಪ್ರಶ್ನಿಸಿದರು.
ಹನುಮಾಕ್ಷಿ ಗೋಗಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.