ADVERTISEMENT

ಕುಡಿಯುವ ನೀರು ಪೂರೈಕೆಗೆ ಆಗ್ರಹ: ಎಎಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 12:35 IST
Last Updated 28 ಡಿಸೆಂಬರ್ 2022, 12:35 IST
ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ, ಹುಬ್ಬಳ್ಳಿಯಲ್ಲಿರುವ ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಬಳಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು– ಪ್ರಜಾವಾಣಿ ಚಿತ್ರ
ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ, ಹುಬ್ಬಳ್ಳಿಯಲ್ಲಿರುವ ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಬಳಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು– ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಅವಳಿ ನಗರದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ, ನಗರದ ಪಾಲಿಕೆಯ ಕೇಂದ್ರ ಕಚೇರಿ ಬಳಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ನಾಲ್ಕೈದು ತಿಂಗಳಿಂದ ನಗರದಲ್ಲಿ ಕುಡಿಯುವ ನೀರಿನ ತೊಂದರೆ ವಿಪರೀತವಾಗಿದೆ. ಜನ ನೀರಿಲ್ಲದೆ ಪರದಾಡುವ ಸ್ಥಿತಿ ಬಂದಿದೆ. ನೀರು ಪೂರೈಕೆ ಹೊಣೆಯನ್ನು ಖಾಸಗಿ ಎಲ್‌ ಆ್ಯಂಡ್ ಟಿ ಕಂಪನಿಗೆ ವಹಿಸಿದಾಗಿನಿಂದ ಈ ಸಮಸ್ಯೆ ತಲೆದೋರಿದೆ ಎಂದರು.

ನೀರಿನ ಹಾಹಾಕಾರದಿಂದ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇಷ್ಟಾದರೂ ನೀರು ಪೂರೈಕೆಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಜನ ತಾಳ್ಮೆ ಕಳೆದುಕೊಳ್ಳುವುದಕ್ಕೆ ಮುಂಚೆ, ಪಾಲಿಕೆಯು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅನಂತಕುಮಾರ ಬುಗಡಿ, ಪ್ರಧಾನ ಕಾರ್ಯದರ್ಶಿ ವಿಕಾಸ ಸೊಪ್ಪಿನ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.