ADVERTISEMENT

ಹುಬ್ಬಳ್ಳಿ: ಅಂಗವಿಕಲರ ಹುದ್ದೆ ಗುರುತಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಮೇ 2025, 16:25 IST
Last Updated 26 ಮೇ 2025, 16:25 IST
ಹುಬ್ಬಳ್ಳಿಯಲ್ಲಿ ಭಾನುವಾರ ಕರ್ನಾಟಕ ರಾಜ್ಯ ಸರ್ಕಾರಿ ವಿಕಲಚೇತನ ಅಧಿಕಾರಿಗಳ ಸಂಘದ ಸಾಮಾನ್ಯ ಸಭೆಗೂ ಮುಂಚೆ ಪದಾಧಿಕಾರಿಗಳು, ಸದಸ್ಯರು ಫೋಟೊಗೆ ಪೋಸ್‌ ನೀಡಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಕರ್ನಾಟಕ ರಾಜ್ಯ ಸರ್ಕಾರಿ ವಿಕಲಚೇತನ ಅಧಿಕಾರಿಗಳ ಸಂಘದ ಸಾಮಾನ್ಯ ಸಭೆಗೂ ಮುಂಚೆ ಪದಾಧಿಕಾರಿಗಳು, ಸದಸ್ಯರು ಫೋಟೊಗೆ ಪೋಸ್‌ ನೀಡಿದರು.   

ಹುಬ್ಬಳ್ಳಿ: ‘ನಮ್ಮ ಬಹುದಿನಗಳ ಬೇಡಿಕೆಯಾಗಿದ್ದ ವಿಕಲಚೇತನ ನೌಕರರ ಮುಂಬಡ್ತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕಾರಣೀಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಧನ್ಯವಾದ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವಿಕಲಚೇತನ ಅಧಿಕಾರಿಗಳ ಸಂಘದ ಅಧ್ಯಕ್ಷ ರಾಜು ವಿ. ಶಲವಡಿ ಹೇಳಿದರು. 

ನಗರದಲ್ಲಿ ಭಾನುವಾರ ನಡೆದ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

‘ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಂಗವಿಕಲರಿಗೆ ಸಂಬಂಧಪಟ್ಟ ಹೊಸ ಹುದ್ದೆಗಳನ್ನು ಗುರುತಿಸುವ ಕೆಲಸ ನಡೆಯಬೇಕಾಗಿದೆ. ಇದರ ಕಡೆ ಸರ್ಕಾರ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್‌.ಬಿ. ಮೂಲೇರ, ‘ನಮ್ಮ ಹಕ್ಕುಗಳನ್ನು ಪಡೆಯಬೇಕೆಂದರೆ ಸಂಘಟನೆ ಹಾಗೂ ಹೋರಾಟದಿಂದ ಮಾತ್ರ ಸಾಧ್ಯ’ ಎಂದು ಹೇಳಿದರು. 

ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಸ್ವಾಮಿ ಮಾತನಾಡಿ, ‘ಸುಪ್ರೀಂ ಕೋರ್ಟ್‌ ತೀರ್ಪುಗಳು ಹಾಗೂ 2016ರ ವಿಕಲಚೇತನರಿಗೆ ಸಮಾನ ಅವಕಾಶ ಕಾಯ್ದೆ ಅನ್ವಯ ಮುಂಬಡ್ತಿ ಮತ್ತು ಸೌಲಭ್ಯಗಳನ್ನು ಪಡೆಯಬೇಕಾಗಿದೆ. ಅದಕ್ಕಾಗಿ ಸಂಘಟನೆಯನ್ನು ಜಿಲ್ಲಾ ಮಟ್ಟದಿಂದಲೇ ಬಲಪಡಿಸಬೇಕಾಗಿದೆ’ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಮಹೇಶ ಅಂಗಡಿ ಮಾತನಾಡಿ, ‘ರಾಜ್ಯ ಸರ್ಕಾರಿ ವಿಕಲಚೇತನ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ಕರ್ತವ್ಯ ನಿರ್ವಹಿಸಬೇಕು’ ಎಂದರು.    

ಮಹೇಶ ಅಂಗಡಿ ನಿರೂಪಿಸಿದರು. ಪ್ರಶಾಂತ ಹುಬರಟ್ಟಿ ವಂದಿಸಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.