
ಅಣ್ಣಿಗೇರಿ: ಗಣರಾಜ್ಯೋತ್ಸವವು ನಮ್ಮ ಸಂವಿಧಾನದ ಏಕತೆ ಮತ್ತು ಪ್ರಜಾಪ್ರಭುತ್ವದ ಶಕ್ತಿಯನ್ನು ಸ್ಮರಿಸುವ ದಿನವಾಗಿದೆ ಎಂದು ತಹಶೀಲ್ದಾರ್ ಮಂಜುನಾಥ ದಾಸಪ್ಪನವರ ಸಂದೇಶ ನೀಡಿದರು.
ಅವರು ಸ್ಥಳೀಯ ಶಾಸಕರ ಮಾದರಿ ಕೇಂದ್ರ ಶಾಲೆ ಆವರಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಮಾತನಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಮಹನೀಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಥಳೀಯ ಶಾಲಾ ಮಕ್ಕಳಿಂದ ದೇಶ ಪ್ರೇಮ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ, ಪಿಎಸ್ಐ ಯು.ಸಿ.ಪಾಟೀಲ, ಕಂದಾಯ ನಿರೀಕ್ಷಕ ರಿಷಿಕುಮಾರ ಸಾರಂಗಿ, ಶಂಕರ ಕುರಿ, ಮಾರುತಿ ಕಾಳೆ, ಎಸ್.ಬಿ.ಹೊನ್ನೂರಿ, ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.