ADVERTISEMENT

ಮತದಾನ ಪ್ರಜಾಪ್ರಭುತ್ವದ ಜೀವಾಳ: ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ

ಪ್ರಜಾಪ್ರಭುತ್ವ ದಿನ: ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 4:50 IST
Last Updated 11 ಸೆಪ್ಟೆಂಬರ್ 2025, 4:50 IST
ಧಾರವಾಡದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ರಚಿಸಿದ ಚಿತ್ರಗಳು
ಧಾರವಾಡದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ರಚಿಸಿದ ಚಿತ್ರಗಳು   

ಧಾರವಾಡ: ‘ಮತದಾನವು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಮತದಾನದ ಮಹತ್ವವನ್ನು ಸಾರುವ ಕಾರ್ಯಕ್ರಮಗಳನ್ನು ವಿವಿಧ ವಲಯಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭಾ ಹೇಳಿದರು.

ಜಿಲ್ಲಾಡಳಿತ ಹಾಗೂ ಸಮಾಜಕಲ್ಯಾಣ ಇಲಾಖೆಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ನಗರ ಕಲಾ ಗ್ಯಾಲರಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಚಿತ್ರಕಲಾ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಪ್ರಜಾಪ್ರಭುತ್ವದ ಮಹತ್ವದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಪರಿಚಯಿಸಲು ಭಾಷಣ ಸ್ಪರ್ಧೆ, ಚಿತ್ರಕಲೆ ಮತ್ತು ಛಾಯಾಚಿತ್ರ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ ಎಂದರು.

ADVERTISEMENT

ಮತದಾನದ ಮಹತ್ವ ಸಾರುವ ಚಿತ್ರಗಳನ್ನು ವಿದ್ಯಾರ್ಥಿಗಳು ರಚಿಸಿದರು. ಸರ್ಕಾರಿ ಚಿತ್ರಕಲಾ ಕಾಲೇಜಿನ ಪ್ರಾಚಾರ್ಯ ಬಸವರಾಜ ಕುರಿಯವರ ಅಧ್ಯಕ್ಷತೆ ವಹಿಸಿದ್ದರು. ಚಿತ್ರಕಲಾ ಪರಿಣತ ಬಿ.ಮಾರುತಿ, ಪ್ರೊ. ಎಸ್.ಕೆ.ಪತ್ತಾರ , ಎಫ್.ವಿ.ಚಿಕ್ಕಮಠ, ಚಿತ್ರ ಕಲಾ ಸ್ಪರ್ಧೆಯ ಸಂಯೋಜಕಿ ಪ್ರಿಯದರ್ಶಿನಿ ಹಿರೇಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.